ಮಂಡ್ಯ,ಅಕ್ಟೋಬರ್,12,2023(www.justkannada.in): ತಮಿಳುನಾಡಿಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನಿನ್ನೆ CWRC ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ರಾಜ್ಯ ಸರ್ಕಾರ, ಸಂಸದರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಖಾಲಿ ಬಿಂದಿಗೆ ಕೊಟ್ಟಿದೆ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದು ಹೋರಾಟಕ್ಕೆ ಕನ್ನಡಸೇನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.
ನಿನ್ನೆ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಅಕ್ಟೋಬರ್ 16ರಿಂದ ಅ.30ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ. ಸಮಿತಿಯ ಆದೇಶದ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
Key words: Continued- Cauvery –protest-mandya