ಬೆಂಗಳೂರು,ಫೆಬ್ರವರಿ,18,2022(www.justkannada.in): ಸಚಿವ ಸಂಪುಟದಿಂದ ಕೆ.ಎಸ್ ಈಶ್ವರಪ್ಪರನ್ನ ವಜಾಗೊಳಿಸುವಂತೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಸದಸ್ಯರು ನಡೆಸುತ್ತಿರುವ ಧರಣಿ ಇಂದೂ ಸಹ ಮುಂದುವರೆದಿದೆ.
ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದಾರೆಂದು ಆರೋಪಿಸಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. ಇಂದು ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಾವಿಗಿಳಿದು ಭಿತ್ತಿಪತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದು ಗದ್ದಲ ಹಿನ್ನೆಲೆ ಗರಂ ಆದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನ ಕೆಲ ಕಾಲ ಮುಂದೂಡಿದರು.
Key words: Continued-Congress-protests