ನವದೆಹಲಿ,ಜೂನ್,17,2022(www.justkannada.in): ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿದ್ದು, ಉತ್ತರಪ್ರದೇಶ, ಬಿಹಾರದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವಕರನ್ನ ಸೇರಿಸಿಕೊಳ್ಳುವ ಅಗ್ನಿಪಥ್ ಯೋಜನೆಯನ್ನ ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿದೆ. ಆದರೆ ಕೊರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಸೇನಾನೇಮಕಾತಿ ನಡೆದಿಲ್ಲ. ಹೀಗಾಗಿ
ಹಿಂದಿನಂತೆಯೇ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ನಿನ್ನೆಯಿಂದಲೇ ದೇಶದಾದ್ಯಂತ ಪ್ರತಿಭಟನೆ ಶುರವಾಗಿತ್ತು.ಬಿಹಾರದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದು ಕಿಟಕಿ ಗಾಜುಗಳನ್ನು ಪುಡಿ ಮಾಡಲಾಗಿದೆ. ಇಡೀ ರಾಜ್ಯಾದ್ಯಂತ ಯುವಕರು ರೈಲ್ವೆ ಹಳಿ ಮತ್ತು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಉತ್ತರಪ್ರದೇಶದಲ್ಲೂ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹಚ್ಚಿ, ರೈಲ್ವೆ ನಿಲ್ದಾಣದಲ್ಲಿರುವ ಆಸ್ತಿ ಪಾಸ್ತಿಯನ್ನು ಹಾನಿಗೊಳಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ವಾರಣಾಸಿಯಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಪ್ರತಿಭಟನಾಕಾರರನ್ನ ಚದುರಿಸಲು ಲಾಠಿಚಾರ್ಜ್ ಮಾಡಲಾಗಿದೆ. ಪ್ರತಿಭಟನೆ ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
Key words: Continued- nationwide- protests -against –Agnipath-project