ಮೈಸೂರು,ಸೆ,4,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕಾರ ನೀಡಿಲ್ಲ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಬಂಧಿಸಿರುವ ಕ್ರಮ ಖಂಡಿಸಿ ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆ ಮುಂದುವರೆದಿದೆ.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನ ರಾಮಸ್ವಾಮಿ ಸರ್ಕಲ್, ಬಿಳಿಕೆರೆ ಮತ್ತು ಹೆಚ್.ಡಿ ಕೋಟೆಯಲ್ಲಿ ಧರಣಿ ನಡೆಸುತ್ತಿದ್ದಾರೆ. ಮೈಸೂರಿನ ನ್ಯಾಯಾಲಯದ ಬಳಿಯಿಂದ ಕಾಂಗ್ರೆಸ್ ಮುಖಂಡ ಹರೀಶ್ ಗೌಡ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ರಸ್ತೆ ಮೂಲಕವಾಗಿ ಸಾಗಿ ರಾಮಸ್ವಾಮಿ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರ ಹಾಕಲಾಯಿತು.
ಒಕ್ಕಲಿಗ ಸಮುದಾಯದ ನಾಯಕರು ಮಾಜಿ ಸಚಿವ ಡಿಕೆ ಶಿವಕುಮಾರ್ ಬೆನ್ನಿಗೆ ನಿಂತಿದ್ದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ, ರಾಮಸ್ವಾಮಿ ವೃತ್ತದ ಬಳಿ ರಸ್ತೆಸಂಚಾರ ತಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಡಿಕೆಶಿ ಬಂಧನ ಖಂಡಿಸಿ ಬಿಳಿಕೆರೆಯಲ್ಲೂ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪಕ್ಷಬೇಧ ಮರೆದು ಪ್ರತಿಭಟನೆ ನಡೆಸಿದರು. ಕೆಲ ಸಮಯ ಅಂಗಡಿ ಮುಂಗಟ್ಟು ಬಂದ್ ಮಾಡಿಸಿ ಧರಣಿ ನಡೆಸಿದ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಡಿಕೆಶಿವಕುಮಾರ್ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹೆಚ್.ಡಿ ಕೋಟೆಯಲ್ಲೂ ಆಕ್ರೋಶ…
ಡಿಕೆಶಿ ಬಂಧನ ಖಂಡಿಸಿ ಎಚ್ ಡಿ ಕೋಟೆಯಲ್ಲೂ ತಾಲೂಕು ಒಕ್ಕಲಿಗರ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಚ್ ಡಿ ಕೋಟೆ ಮುಖ್ಯರಸ್ತೆ ಯಿಂದ ಮಿನಿವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಹಾಗು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಂದ್ರ ಸರ್ಕಾರ ಇಡಿ ಇಲಾಖೆಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ.. ರಾಜಕೀಯ ದುರುದ್ದೇಶದಿಂದ ಅವರನ್ನ ಬಂಧಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
Key words: Continued -protests – Mysore-Human chain –outrage-central govrnament