ಬೆಂಗಳೂರು,ಮಾರ್ಚ್,23,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನ ಹೈಕೋರ್ಟ್ ಸಿಜೆ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಲಿ ಎಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಧರಣಿ ಮುಂದುವರೆಸಿದ ಹಿನ್ನೆಲೆ ವಿಧಾನಸಭೆ ಕಲಾಪವನ್ನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಾಳೆಗೆ ಮುಂದೂಡಿದರು.
ರಮೇಶ್ ಜಾರಕಿಹೊಳಿ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸಬೇಕು. ಎಸ್ ಯಟಿ ತನಿಖೆಯಲ್ಲಿ ನಂಬಿಕೆ ಇಲ್ಲ. ಹೈಕೋರ್ಟ್ ಸಿಜೆ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಇಂದು ಬೆಳಿಗ್ಗೆ ಸದನ ಆರಂಭವಾದಗಿಂದಲೂ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಭೋಜನಾ ವಿರಾಮದ ನಂತರ ಮಧ್ಯಾಹ್ನ 3 ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರೆಸಿದರು. ಈ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನ ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.
Key words: Continuing –protest-Congress- Adjournment – Assembly