ಬೆಂಗಳೂರು,ಡಿಸೆಂಬರ್,12,2020(www.justkannada.in): ರಾಜ್ಯ ಸರ್ಕಾರ ಕರೆದು ಮಾತನಾಡದಿದ್ದರೇ ಸಾರಿಗೆ ನೌಕರರ ಮುಷ್ಕರ ಮುಂದುವರೆಯುತ್ತದೆ ಎಂದು ರಾಜ್ಯ ರೈತರ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ಹೂಡಿದ್ದು ಇವರ ಹೋರಾಟಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ರಾಜ್ಯಾದ್ಯಂತ ಸಾರಿಗೆ ಬಸ್ ಸಂಚಾರ ಬಂದ್ ಆಗಿದ್ದು ಜನರು ಪರದಾಟ ನಡೆಸುತ್ತಿದ್ದಾರೆ.
ಈ ಕುರಿತು ಇಂದು ಮಾತನಾಡಿರುವ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಕರೆದು ಮಾತನಾಡದಿದ್ದರೇ ಸಿಎಂ ಬಿಎಸ್ ಯಡಿಯೂರಪ್ಪ ಕರೆದು ಮಾತನಾಡಲಿ. ಒಂದು ವೇಳೆ ಕರೆದು ಮಾತನಾಡಿ ಪರಿಹಾರ ಕಂಡುಕೊಳ್ಳದಿದ್ದರೇ ಮುಷ್ಕರ ಮುಂದುವರೆಯಲಿದೆ. ಸಾರಿಗೆ ಸಂಚಾರ ಬಂದ್ ನಿಂದ ಆಗುವ ಸಮಸ್ಯೆಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮಧ್ಯಾಹ್ನ 1 ಗಂಟೆಗೆ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ಮುಖಂಡರ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ.
English summary…
Transport Dept. employees protest will continue if govt. fails to talk: Kodihalli Chandrashekar warns
Bengaluru, Dec. 12, 2020 (www.justkannada.in): Karnataka State Farmers Association President Kodihalli Chandrashekar has warned the State Government that the transport department employees’ protest will continue if it fails to talk with them.
Speaking to the presspersons in Bengaluru today, he said if Transport Minister Lakshman Savadi doesn’t talk, let the Chief Minister himself talk. Otherwise, the protest will not stop, and the government itself will be held responsible for the problems faced by the public.
Keywords: Transport Department protest/ Kodihalli Chandrashekar/ protest will continue
Key words: Continuing- strike – transport workers – calling – government-Kodihalli Chandrasekhar -Warning.