ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೀದರ್,ಡಿಸೆಂಬರ್, 27,2024 (www.justkannada.in): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ.

ಬೀದರ್ ನ ಗಾಂಧಿ ಗಂಜ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಳಾದ ರಾಜೇಶ್,  ಶಾಮಲಾ ಅಮಾನತಾದವರು. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಕರ್ತವ್ಯ ಲೋಪ ಆರೋಪದಡಿ  ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ಸಚಿನ್ ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದನ್ನ ನೋಡಿ  ಸಚಿನ್ ಕುಟುಂಬಸ್ಥರು  ಠಾಣೆಗೆ ಧಾವಿಸಿದ್ದರು. ಸಚಿನ್  ಹುಡುಕಿ ಕೊಡುವಂತೆ ದೂರು ನೀಡಿದ್ದರು. ಆದರೆ  ದೂರು ದಾಖಲಿಸಲು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಯಲ್ಲಿ ಅಮಾನತು ಮಾಡಲಾಗಿದೆ.

Key words: Contractor, suicide case, Two police, suspended