ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಡಿಸೆಂಬರ್,30,2024 (www.justkannada.in):  ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ದ ಗುತ್ತಿಗೆ ನೀಡದೆ ವಂಚನೆ ಕೊಲೆ ಬೆದರಿಕೆ ಆರೋಪ ಮಾಡಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಲಾಗಿದೆ.  ಎಲ್ಲಾ ಪ್ರಕರಣಗಳನ್ನ ಸಿಬಿಐ ತನಿಖೆಗೆ ಕೊಡಲು ಆಗಲ್ಲ.  ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿ ಅನಗತ್ಯ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ ಕುರಿತು ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್, ಬಹಳ ಎಚ್ಚರಿಕೆಯಿಂದ ಹೊಸ ವರ್ಷಾಚರಣೆ ಮಾಡಬೇಕು. ಆಚರಣೆ ವೇಳೆ ಅನೇಕರು ಪ್ರಾಣ ಕಳೆದುಕೊಂಡಿದ್ದನ್ನ ನೋಡಿದ್ದೇವೆ. ಬೆಂಗಳೂರಷ್ಟೇ ಅಲ್ಲ ಬೇರೆ ಬೇರೆ ಜಿಲ್ಲೆಗಳಲ್ಲೂ ಪ್ರಾಣ ಕಳೆದುಕೊಂಡಿದ್ದಾರೆ.  ಹೀಗಾಗಿ  ಕಟ್ಟನಿಟ್ಟಿನ ಕ್ರಮಕ್ಕೆ ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಿದ್ದೇವೆ.  ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ.  ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಬೇಕು ಎಂದರು.

Key words: Contractor, Sachin,  suicide case, CID, Dr. G. Parameshwar