ಬೆಂಗಳೂರು,ಅಕ್ಟೋಬರ್,27,2021(www.justkannada.in): ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಮುಕ್ತಾಯವಾಗಲಿದ್ದು ಸಂಜೆ 7 ಗಂಟೆ ನಂತರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಈ ಮಧ್ಯೆ ಮೂರು ಪಕ್ಷಗಳ ವಾಕ್ ಸಮರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮಾಡಿ ಸಿದ್ಧರಾಮಯ್ಯಗೆ ಟಾಂಗ್ ನೀಡಿರುವ ಮಾಜಿ ಸಚಿವ ಸಿಟಿ ರವಿ, ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ? ಎಂದು ಪ್ರಶ್ನಿಸಿದ್ದು ಇದೀಗ ಇದು ವಿವಾದಕ್ಕೆ ಕಾರಣವಾಗಿದೆ.
ಹಾಗೆಯೇ ಟ್ವೀಟ್ ವಾರ್ ಮುಂದುವರೆಸಿ, ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ.. ದಾಸಶ್ರೇಷ್ಠ ಕನಕದಾಸರ ಈ ಮಾತುಗಳನ್ನು ಎಂದೋ ಮರೆತುಬಿಟ್ಟು ಕುಲಗಳನ್ನು ಒಡೆದು, ಸಮಾಜವನ್ನು ಅಸ್ಥಿರಗೊಳಿಸಿ,ತಮ್ಮ ಬೇಳೆ ಬೇಯಿಸಿಕೊಳ್ಳುವುದೇ ರಾಜಕೀಯ ಎಂದು ಭಾವಿಸಿದ್ದು ದುರಂತ ಎಂದು ಕಿಡಿಕಾರಿದ್ದಾರೆ.
Key words: Controversial –tweet- former minister -CT Ravi-about-siddaramaiah