ಮೈಸೂರು,ಫೆಬ್ರವರಿ,10,2021(www.justkannada.in) : ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ.
ಹಂದನಹಳ್ಳಿ ಗ್ರಾಮದ ಗೇಟ್ ಬಳಿ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗ್ರಾಮದ ಆರೋಪಿ ಜಯಂತ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಜನವರಿ 22 ರಂದು ಕ್ಷುಲ್ಲಕ ಕಾರಣಕ್ಕೆ ಜಯಂತ್ ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಮಾರಣಾಂತಿಕ ಹಲ್ಲೆಯ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಹಿನ್ನೆಲೆ ಜಯಂತ್,ವಿಘ್ನೇಶ್, ದೀಪಕ್ನನ್ನು ಪೊಲೀಸರು ಬಂಧಿಸಿದರು. ಆರೋಪಿಗಳು ಹಂದರಹಳ್ಳಿ ಬಳಿ ಹೆಡ್ ಕಾನ್ಸ್ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಎಸ್ಐ ಜಯಪ್ರಕಾಶ್ ಆರೋಪಿ ಜಯಂತ್ ಕಾಲಿಗೆ ಗುಂಡು ಹಾರಿಸಿದ್ದಾರೆ.ಆರೋಪಿ ಜಯಂತ್ ಹಾಗೂ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಪೇದೆಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
key words : cops-Sliced-Keep going-escape-Tried-Accused-Shot-leg