ಬೆಂಗಳೂರು,ಜು,7,2020(www.justkannada.in): ಕೊರೋನಾ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರದ ಕೆಲಸಕ್ಕೆ ಕೇಂದ್ರ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ನಿರ್ವಹಣೆ ಸಂಬಂಧ ಅಧ್ಯಯನ ನಡೆಸಲು ಕೇಂದ್ರತಂಡ ರಾಜ್ಯಕ್ಕೆ ಇಂದು ಭೇಟಿ ನೀಡಿದೆ. ಕೊರೋನಾ ಪರಿಸ್ಥಿತಿ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ತಂಡದ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಭಾಗಿಯಾಗಿದ್ದರು.
ಸಭೆಯಲ್ಲಿ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣದ ಕ್ರಮಗಳ ಬಗ್ಗೆ ಕೇಂದ್ರ ತಂಡಕ್ಕೆ ಮಾಹಿತಿ ನೀಡಿತು. ಈ ವೇಳೆ ಕಂಟೇನ್ ಮೆಂಟ್ ಜೋನ್ ಗಳಲ್ಲಿ ಕೊರೋನಾ ಟೆಸ್ಟ್ ಹೆಚ್ಚಿಸುವಂತೆ ಕೇಂದ್ರ ತಂಡ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಕೊರೋನಾ ನಿರ್ವಹಣೆ ಸಂಬಂಧ ಕೇಂದ್ರ ತಂಡಕ್ಕೆ ಮಾಹಿತಿ ನೀಡಿದ್ದೇವೆ. ರಾಜ್ಯ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕಂಟೇನ್ ಮೆಂಟ್ ಜೋನ್ ಗಳಲ್ಲಿ ಕೊರೋನಾ ಟೆಸ್ಟ್ ಹೆಚ್ಚಿಸುವಂತೆ ಸಲಹೆ ನೀಡಿದ್ದಾರೆ. ಈಗ ಕಂಟೇನ್ ಮೆಂಟ್ ಜೋನ್ ಗಳ ಪರಿಶೀಲನೆಗೆ ಅಧಿಕಾರಿಗಳ ತಂಡ ತೆರಳಿದ್ದು ಬಳಿಕ ಸಿಎಂ ಜತೆ ಮತ್ತೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
Key words: Corona- appreciated- state government- action-central team- advised