ನವದೆಹಲಿ,ಫೆಬ್ರವರಿ,11,2022(www.justkannada.in): ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 58,077 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಲ್ಲಿ ಕೊರೋನಾಗೆ 675 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,07,177ಕ್ಕೆ ಏರಿದೆ. ದೈನಂದಿನ ಪಾಸಿಟಿವಿಟಿ ದರವು ಶೇಕಡಾ 3.89 ರಷ್ಟಿದ್ದು. ದೇಶದಲ್ಲಿ ಪ್ರಸ್ತುತ 6,97,802 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಇದುವರೆಗೆ ಒಟ್ಟು 1,71,79,51,432 ಡೋಸ್ ಲಸಿಕೆ ನೀಡಲಾಗಿದೆ.
Key words: Corona case -decline – country.