ನವದೆಹಲಿ,ಜು,7,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಲಕ್ಷ ಗಡಿ ದಾಟಿದೆ. ಒಂದೇ ದಿನದಲ್ಲಿ 22,252 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಕಳೆದ 24 ಗಂಟೆಗಳಲ್ಲಿ 22,252 ಜನರಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇನ್ನು ನಿನ್ನೆಒಂದೇ ದಿನ 467 ಜನರು ಕೊರೊನಾ ವೈರಸ್’ಗೆ ಬಲಿಯಾಗಿದ್ದಾರೆ. ಈಮೂಲಕ ಈವರೆಗೆ ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ.
ಸದ್ಯ 7,19,665 ಮಂದಿ ಸೋಂಕಿತರ ಪೈಕಿ 4,39,948 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 2,59,557 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದು ಬಂದಿದೆ.
Key words: Corona – crossing 7 lakh -borders – country