ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಮೂವರ ಸಾವು: ಹಾಸನದಲ್ಲೂ ಮಹಾಮಾರಿಗೆ ಓರ್ವ ವ್ಯಕ್ತಿ ಬಲಿ…

ಮಂಗಳೂರು,ಜು,4,2020(www.justkannada.in):  ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿನಿಂದ  ನಿನ್ನೆ ರಾತ್ರಿ ಒಬ್ಬರು ಮತ್ತು  ಇಂದು ಬೆಳಿಗ್ಗೆ ಇಬ್ಬರು ಮೃತಪಟ್ಟಿದ್ದಾರೆ.  ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 22ಕ್ಕೇರಿದೆ.

ಉಸಿರಾಟದ ತೀವ್ರ ತೊಂದರೆ ಎದುರಿಸುತ್ತಿದ್ದ ಸುಳ್ಯ ತಾಲ್ಲೂಕಿನ ನಿವೃತ್ತ ಶಿಕ್ಷಕಿಯೊಬ್ಬರು ಶುಕ್ರವಾರ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತದೇಹದ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು, ಕೋವಿಡ್‌ ಸೋಂಕು ದೃಢಪಟ್ಟಿದೆ.corona-death-dakshina-kannada-hassan-bengalore

ಇನ್ನು ಹಾಸನದಲ್ಲಿ ಇಂದು ಕೊರೋನಾ ಮಹಾಮಾರಿ ಓರ್ವ ವ್ಯಕ್ತಿಯನ್ನ ಬಲಿ ಪಡೆದಿದೆ. 38 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.  ಮೃತ ವ್ಯಕ್ತಿಗೆ ಕೊವೀಡ್ ಟೆಸ್ಟ್ ಮಾಡಲಾಗಿತ್ತು.  ನಂತರ ವ್ಯಕ್ತಿಗೆ ಕೊರೋನಾ ಸೋಂಕಿರುವುದು ಪತ್ತೆಯಾಗಿದೆ. ಈ ಮೂಲಕ ಹಾಸನದಲ್ಲಿ ಮೃತರ ಸಂಖ್ಯೆ7ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಶಂಕರ ಮಠದ ನಿವಾಸಿ 60 ವರ್ಷದ ವೃದ್ಧ ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

 

Key words: Corona – death –dakshina Kannada-Hassan – Bengalore