ಬೆಂಗಳೂರು,ಡಿಸೆಂಬರ್,22,2020(www.justkannada.in): ದೇಶಾದ್ಯಂತ ಹೊಸ ಕೊರೋನಾ ಭೀತಿ ಎದುರಾಗಿದ್ದು, ಕೊರೋನಾ ರೂಪಾಂತರ ಪತ್ತೆಯಾದ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಕಟ್ಟಿನಿಟ್ಟಾಗಿ ತಪಾಸಣೆ ಮಾಡಲಾಗುತ್ತಿದ್ದು ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಹೊಸ ಕೊರೋನಾ ಪ್ರಭೇದ ಪತ್ತೆಯಾದ ಹಿನ್ನೆಲೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಕುರಿತು ಚರ್ಚೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊರೋನಾ ರೂಪಾಂತರ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನೈಟ್ ಕರ್ಫ್ಯೂ ವಿಧಿಸಬಹುದು. ನೈಟ್ ಕರ್ಫ್ಯೂ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Key words: corona-Discuss -night curfew – CM – Minister- Dr K Sudhakar