ಬೆಂಗಳೂರು,ಏಪ್ರಿಲ್,11,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ಕೊರೋನಾ ಹೆಚ್ಚಿರುವ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಬೇಡ ಅಂದರೇ ಕೋವಿಡ್ ನಿಯಮ ಪಾಲಿಸಿ ಎಂದು ಜನರಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಮೈಕ್ರೋ ಕಂಟೋನ್ಮೆಂಟ್ ಜೋನ್ ಗಳನ್ನ ಹೆಚ್ಚು ಮಾಡುತ್ತೇವೆ. 2ನೇ ಅಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ 3 ದಿನ ಲಾಕ್ ಡೌನ್ ಮಾಡಲಾಗಿದೆ. ಅಂತಹ ಪರಿಸ್ಥಿತಿ ಕರ್ನಾಟಕಕ್ಕೆ ಬರಬಾರದು. ಹೀಗಾಗಿ ಲಾಕ್ ಡೌನ್ ಬೇಡ ಅಂದ್ರೆ ಜನರು ಸಹಕರಿಸಿ ಕೋವಿಡ್ ನಿಯಮ ಪಾಲಿಸಿ ಎಂದು ಹೇಳಿದರು.
ಕೊರೋನಾ ಹಿನ್ನೆಲೆ ಲಸಿಕಾ ಉತ್ಸವ ಆರಂಭವಾಗಿದ್ದು ಈ ಮಧ್ಯೆ ಲಸಿಕಾ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಂಟೇನ್ಮೆಂಟ್ ಜೋನ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ ಎಂದರು.
Key words: corona-lock down- people- Cooperation-Minister- Sudhakar.