ಬೆಂಗಳೂರು,ಜೂ,22,2020(www.justkannada.in): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಇದೀಗ ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮವನ್ನ ಮತ್ತೆ ಬದಲಿಸಿದೆ.
ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುತ್ತಿರುವವರಿಂದ ಕೊರೊನಾ ಸೋಂಕು ಹೆಚ್ಚಾಗಿತ್ತಿದೆ. ಈ ಹಿನ್ನಲೆ ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಿದ್ದು, ಹೊರ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯ ಕ್ವಾರಂಟೈನ್ ಪಾಲಿಸುವಂತೆ ಸೂಚಿಸಲಾಗಿದೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕ್ವಾರಂಟೈನ್ ಅವಧಿ ವಿಸ್ತರಿಸಲಾಗಿದೆ. ಹೊರ ರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತದ ಎಂದು ತಿಳಿಸಿದ್ದಾರೆ.
ಈ ಹಿಂದೆ ಹೊರ ರಾಜ್ಯಗಳಿಂದ ಬರುವವರಿಗೆ 14 ಕ್ವಾರಂಟೈನ್ ಕಡ್ಡಾಯವಾಗಿತ್ತು. ಆ ಬಳಿಕ ನಿಯಮ ಸಡಿಲಿಕೆ ಮಾಡಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಮಾತ್ರ 14 ದಿನ ಕ್ವಾರಂಟೈನ್ ವಿಧಿಸಲಾಗುತ್ತಿತ್ತು. ಆದರೆ, ಕಳೆದ ಕೆಲ ದಿನಗಳಿಂದ ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಲ್ಲೇ ಹೆಚ್ಚಾಗಿ ಸೋಂಕು ಕಂಡುಬರುತ್ತಿರುವ ಕಾರಣ ಎಲ್ಲ ರಾಜ್ಯಗಳಿಂದ ಬರುವವರಿಗೆ 14 ದಿನ ಕ್ವಾರಂಟೈನ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
Key words: Corona-increase -government -changed -Quarantine rule