ಕಲಬುರಗಿ,ಜು,20,2020(www.justkannada.in): ಕಲ್ಬುರ್ಗಿಯಲ್ಲಿ ಕೊರೋನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಅನ್ನ ಜುಲೈ 27ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಆದೇಶ ಹೊರಡಿಸಿದ್ದಾರೆ.
ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜುಲೈ 14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ಲಾಕ್ ಡೌನ್ ವಿಧಿಸಲಾಗಿತ್ತು. ಇದೀಗ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ರವಿವಾರ ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ನೀಡಲಾಗಿರುವ ಚಟುವಟಿಕೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ ಅನ್ವಯವಾಗುವುದಿಲ್ಲ. ಕಲಬುರಗಿಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.
Key words: Corona- increase – Lockdown -Extension – Kaluburgi