ಮೈಸೂರು,ಆ,3,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದ್ದು ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ಕೊರೋನಾ ಮಹಾಮಾರಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳುತ್ತಿದೆ.
ಈ ಮಧ್ಯೆ ಇಂದು ಶ್ರಾವಣ ಮಾಸದ ಹುಣ್ಣಿಮೆ ಹಿನ್ನೆಲೆ ದಕ್ಷಿಣಕಾಶಿ ನಂಜನಗೂಡು ದೇಗುಲ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದು ಹೆಚ್ಚಿನ ಭಕ್ತರು ನಂಜನಗೂಡಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಶ್ರಾವಣ ಮಾಸದ ಹುಣ್ಣಿಮೆಯ ಜೊತೆಗೆ ಸೋಮವಾರ ಆಗಿರುವುದರಿಂದ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಹೀಗಾಗಿ ಕೊರೋನಾ ಸೋಂಕು ಮತ್ತಷ್ಟು ಹರಡುವ ಆತಂಕದಿಂದ ನಂಜನಗೂಡು ದೇವಾಲಯ ಬಂದ್ ಮಾಡಲಾಗಿದೆ. ದೇಗುಲದಲ್ಲಿ ವಾಡಿಕೆಯಂತೆ ಪೂಜಾ ಕೈಂಕರ್ಯಗಳು ನೆರವೇರಿದೆ. ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವುಕ್ಕೆ ನಿರ್ಬಂಧ ವಿಧಿಸಲಾಗಿದೆ.
Key words: Corona –Increase-Mysore-Restrictions – Nanjangud temple