ಮೈಸೂರು,ಏಪ್ರಿಲ್,12,2021(www.justkannada.in): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಬ್ಬ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಬಂಧ ಹೇರಿದೆ, ಈ ಹಿನ್ನೆಲೆಯಲ್ಲಿ ತಿ. ನರಸೀಪುರ ತಾಲೂಕಿನಲ್ಲಿ ಯುಗಾದಿ ಜಾತ್ರಾ ಮಹೋತ್ಸವಕ್ಕೆ ತಾಲ್ಲೂಕು ಆಡಳಿತ ನಿರ್ಬಂಧ ವಿಧಿಸಿದೆ.
ರಾಜ್ಯಾದ್ಯಂತ ಕೊರೋನ ಹೆಚ್ಚಾಗುತ್ತಿರುವ ಹಿನ್ನಲೆ.ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಈ ಭಾರಿ ಅವಕಾಶವಿಲ್ಲ ಎಂದು ತಾಲ್ಲೂಕು ದಂಡಾಧಿಕಾರಿ ಡಿ. ನಾಗೇಶ್ ಅಧಿಕೃತ ಮಾಹಿತಿ ರವಾನೆ ಮಾಡಿದ್ದಾರೆ.
ಕೊರೋನ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ. ಸರ್ಕಾರದ ಮಾರ್ಗಸುಚಿಯಂತೆ ಹಬ್ಬ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಬಂಧ ಹೇರಿದೆ. ಮೈಸೂರು ಜಿಲ್ಲೆಯಲ್ಲೂ ಕೊರೋನ ಸೋಂಕು ಹೆಚ್ಚಾಗುತ್ತಿದೆ. ಯುಗಾದಿ ಹಬ್ಬದಂದು ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವುದು ವಾಡಿಕೆ. ಆದರೆ ಈ ಭಾರಿ ತ್ರಿವೇಣೀಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಗುಂಪಾಗಿ ಸೇರಬಾರದು.
ಈಗಾಗಲೇ ನದಿಯ ಬಳಿ ಸಾರ್ವಜನಿಕರು ಆಗಮಿಸದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇವೆ. ಸಾರ್ವಜನಿಕರು ಈ ಭಾರಿಯ ಯುಗಾದಿ ಹಬ್ಬವನ್ನ ಮನೆಯಲ್ಲಿಯೇ ಆಚರಣೆ ಮಾಡುವ ಮೂಲಕ. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದು ತಹಶೀಲ್ದಾರ್ ಡಿ. ನಾಗೇಶ್ ಮತ್ತು ಪುರಸಭೆ ಮುಖ್ಯಾಧಿಕಾರಿ ಅಶೋಕ್ ಮನವಿ ಮಾಡಿದ್ದಾರೆ.
Key words: Corona –increase- Restriction – ugadi Jatra- T.Narasipur- Taluk- mysore