ಬೆಂಗಳೂರು,ಸೆಪ್ಟಂಬರ್,24,2020(www.justkannada.in): ಕೊರೋನಾ ಸೋಂಕಿನಿಂದ ಬಳಲುತ್ತಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಶಾಸಕ ನಾರಾಯಣರಾವ್ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ನಾರಾಯಣರಾವ್ ಅವರಿಗೆ ನ್ಯೂಮೊನಿಯಾ ಬಿಪಿ, ಶುಗರ್ ಇದೆ. ಅನಾರೋಗ್ಯ ಹಿನ್ನೆಲೆ ಯಲ್ಲಿ ಬಸವ ಕಲ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ 1 ತಿಂಗಳ ಹಿಂದೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ.
Key words: Corona- infected -MLA -Narayanarao – critical