ಮಧ್ಯಪ್ರದೇಶ, ಜುಲೈ 26, 2020 (www.justkannada.in): ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೋವಿಡ್ -19 ಇರೋದು ಧೃಡಪಟ್ಟಿದೆ.
ಚೌಹಾಣ್ ಅವರು ಆಸ್ಪತ್ರೆಯಲ್ಲಿ ಬೆಡ್ ಮೇಲೆ ಕುಳಿತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಚಿರಾಯು ಆಸ್ಪತ್ರೆಯಲ್ಲಿ ಬೆಡ್ ಮೇಲೆ ಕುಳಿತುಕೊಂಡಿರುವ ಟಿವಿ ನೋಡುತ್ತಾ ಕುಳಿತಿರುವ ಫೋಟೋ ವೈರಲ್ ಆಗಿದೆ.
ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೋವಿಡ್ -19 ಇರೋದು ಶನಿವಾರ ಧೃಡಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.