ಬೆಂಗಳೂರು,ಜೂ,24,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಮ್ಮಾರಿ ಹೆಚ್ಚುತ್ತಿದ್ದು, ಅದ್ದರಿಂದ ಮತ್ತೆ ಲಾಕ್ ಡೌನ್ ವಿಚಾರ ಚರ್ಚೆಗೆ ಬಂದಿದೆ. ಹೀಗಾಗಿ ಈ ಕುರಿತು ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಈ ಹಿಂದೆ 70 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಕೊರೋನಾ ಹೋಯಿತಾ ಎಂದು ಪ್ರಶ್ನಿಸಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಸಿ.ಟಿ ರವಿ, ನಾಳೆ ಸಚಿವ ಸಂಪುಟ ಸಭೆ ಇದೆ. ಈ ವೇಳೆ ಲಾಕ್ ಡೌನ್ ಕುರಿತು ಚರ್ಚೆ ಮಾಡಲಾಗುತ್ತದೆ. ತಜ್ಞರ ವರದಿ ಆದರಿಸಿ ಲಾಕ್ ಡೌನ್ ಬಗ್ಗೆ ತೀರ್ಮಾನಿಸಲಾಗುತ್ತದೆ. ಈ ಹಿಂದೆ 70 ದಿನಗಳ ಕಾಲ ಲಾಕ್ ಡೌನ್ ಮಾಡಿದರೂ ಕೊರೋನಾ ಹೋಗಲಿಲ್ಲ. ಹೀಗಾಗಿ ತಜ್ಞರ ವರದಿ ಆದರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದರು.
Key words: corona- lockdown-minister- CT Ravi