ಮೈಸೂರು ಮಹಾನಗರ ಪಾಲಿಕೆಯ 9 ಸಿಬ್ಬಂದಿಗೆ ಕೊರೋನಾ ಪಾಸಿಟಿವ್…

ಮೈಸೂರು,ಏಪ್ರಿಲ್,7,2021(www.justkannada.in):  ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದ್ದು ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.Illegally,Sand,carrying,Truck,Seized,arrest,driver

ಹೌದು, ನಿನ್ನೆ ನಡೆದ ಪರೀಕ್ಷೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ 9  ಮಂದಿಗೆ ಕೊರೋನಾ ಸೋಂಕು ದೃಢವಾಗಿದೆ. ಒಟ್ಟು 196 ಜನರಿಗೆ ಕೊರೋನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 9 ಜನರಿಗೆ ಕೋರೊನಾ ಪಾಸಿಟಿವ್ ಕಂಡು ಬಂದಿದೆ.

Corona positive-  Mysore City corporation-staff
ಕೃಪೆ-internet

ಈ ಕುರಿತು ಮಾತನಾಡಿರುವ ಪಾಲಿಕೆ ಆರೋಗ್ಯಾಧಿಕಾರಿ ಡಾ ನಾಗರಾಜ್, ಪಾಲಿಕೆಯ 9 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. 9 ಜನರಲ್ಲಿ ಮೂವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು ಹೋಮ್  ಐಸೋಲೇಷನ್ ಆಗಿದ್ದಾರೆ.  ಪಾಲಿಕೆ ಕಚೇರಿಗಳಲ್ಲಿ ಸ್ಯಾನಿಟೈಸ್ ಸಿಂಪಡಣೆ ಮಾಡಲಾಗುತ್ತಿದೆ. ಸಾರ್ವಜನಿಕರು ತೀರಾ ಅಗತ್ಯವಿದ್ದಲ್ಲಿ ಮಾತ್ರ ಪಾಲಿಕೆ ಕಚೇರಿಗೆ ಬನ್ನಿ. ಅನವಶ್ಯಕವಾಗಿ ಕಚೇರಿಗೆ ಬರುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ.

Key words: Corona positive-  Mysore City corporation-staff