ಯಾದಗಿರಿ,ಜೂ,13,2020(www.justkannada.in): ಕೊರೋನಾ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೋವಿಡ್ – 19 ಪರಿಶೀಲನಾ ಸಭೆಯಲ್ಲಿ ಸಚಿವ ಡಾ.ಕೆ ಸುಧಾಕರ್ ಮಾತನಾಡಿದರು. ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜ್ವರದ ಸೋಂಕು ಕಾಣಿಸಿಕೊಂಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರ ಟೆಸ್ಟ್ ಮಾಡಬೇಕು. ಮತ್ತು ಅವರ ಮೇಲೆ ನಿರಂತರ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಇದು ಜಿಲ್ಲೆಗೆ ಮೊದಲ ಭೇಟಿ. ಯಾದಗಿರಿ ಮತ್ತು ಉಡುಪಿ ಹೆಚ್ಚು ಸೋಂಕಿತರು ಇದ್ದಾರೆ ಎಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. 735 ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಮೇ ವರೆಗೆ ಯಾವ ಪ್ರಕರಣ ಇರಲಿಲ್ಲ. ಮಹಾರಾಷ್ಟ್ರ ದಿಂದ ಬಂದವರಿಂದ ಸೋಂಕು ಹರಡಿದೆ ಎಂದು ಸುಧಾಕರ್ ತಿಳಿಸಿದರು.
ಜಿಲ್ಲಾಡಳಿತದ ಪರಿಶ್ರಮದಿಂದ ಗ್ರಾಮ ಮಟ್ಟದಲ್ಲಿ ಅರಿವು ಚೆನ್ನಾಗಿದೆ. ಹೀಗಾಗಿ ಆತಂಕದ ಸ್ಥಿತಿಇಲ್ಲ. ಯಾರಲ್ಲೂ ರೋಗದ ಲಕ್ಷಣ ಇಲ್ಲ. ಪ್ರಥಮ ಮತ್ತು ದ್ವೀತಿಯ ಸಂಪರ್ಕಿತರ ಮೇಲೂ ನಿಗಾ ಇರಿಸಲಾಗಿದೆ ಎಂದರು.
ಮುಖ್ಯ ವಾಗಿ ಒಂದು ವಾರದಲ್ಲಿ ಪ್ರಯೋಗಾಲಯ ಕಾರ್ಯಾಚರಣೆ ಮಾಡಲಿದೆ. ಮೆಡಿಕಲ್ ಕಾಲೇಜು ಆರಂಭಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. 435 ಕೋಟಿ ವೆಚ್ಚದ ಕಾಮಗಾರಿಗೆ ಕೆಲ ದಿನಗಳಲ್ಲಿ ಮುಖ್ಯಮಂತ್ರಿ ಅವರಿಂದ ಭೂಮಿ ಪೂಜೆ ಮಾಡಲಾಗುವುದು ಎಂದು ಸಚಿವ ಸುಧಾಕರ್ ಪ್ರಕಟಿಸಿದರು.
ಆಸ್ಪತ್ರೆಗೆ ಬೇಕಾದ ಉಪಕರಣಗಳನ್ನು ಖರೀದಿಗೆ ಸೂಚಿಸಲಾಗಿದೆ. 150 ಬೋಧಕ ಸಿಬ್ಬಂದಿ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಚಿಕ್ಕಬಳ್ಳಾಪುರ ಮತ್ತು ಯಾದಗಿರಿಗಳಲ್ಲಿ 30 ತಿಂಗಳಿಗೆ ಮುಂಚಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಎರಡು ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಿರುವುದು ಮೆಚ್ಚುಗೆ ಸಂಗತಿ. ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ ಹಿರಿಯ ನಾಗರಿಕರು ಮತ್ತು ಇತರ ರೋಗಿಗಳಿರುವವರ ಮೇಲೆ ಸತತ ನಿಗಾವಹಿಸಲಾಗಿದೆ. ಜಿಲ್ಲಾಡಳಿತದ ಕಾರ್ಯ ವೈಖರಿ ನನ್ನ ಆತಂಕವನ್ನು ನಿವಾರಿಸಿದೆ. ಗ್ರಾಮ ಮಟ್ಟದಲ್ಲಿ ಜನರ ಸಹಕಾರ ಉತ್ತಮ ಮಟ್ಟದಲ್ಲಿ ಇರುವುದು ಶ್ಲಾಘನೀಯ ಎಂದರು.
ಇನ್ನೂ ಕೆಲ ಫೀವರ್ ಕ್ಲಿನಿಕ್ ತೆರೆಯಲು ಸೂಚಿಸಲಾಗಿದೆ. ಹೊರಗಿಂದ ಬಂದವರ ಮೇಲೆ ನಿಗಾ ವ್ಯವಸ್ಥೆ ಇದೇ ರೀತಿ ಮುಂದುವರಿದರೆ, ಕೊರೋನಾ ನಿಗ್ರಹ ಸಾಧ್ಯವಿದೆ. ಆದಷ್ಟು ಶೀಘ್ರ ಮೆಡಿಕಲ್ ಕಾಲೇಜು ಆಭಿಸಲಾಗುವುದು ಎಂದರು. ಶಾಸಕರಾದ ವೆಂಟರೆಡ್ಡಿ, ದರ್ಶನಾಪುರ್, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸಭೆಯಲ್ಲಿ ಹಾಜರಿದ್ದರು.
Key words: Corona- ready -serious situation-Minister-sudhakar