ಬೆಂಗಳೂರು, ಡಿಸೆಂಬರ್ 20,2023(www.justkannada.in): ರಾಜ್ಯದಲ್ಲಿ ಕೊರೊನಾ ಭೀತಿ ಆತಂಕ ಎದುರಾಗಿದ್ದು, ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿನಿತ್ಯ 5 ಸಾವಿರ ಕೋವಿಡ್ ಟೆಸ್ಟ್ ನಡೆಸಲಿದೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಮಾರ್ಗಸೂಚಿ ಪ್ರಕಟಿಸಿದ್ದು, ಇದರ ಬೆನ್ನಲ್ಲೇ ಕೋವಿಡ್ ತಪಾಸಣೆ ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ. ವಿಕಾಸಸೌಧದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಿಸೆಂಬರ್ 23ರಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುತ್ತದೆ. ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಜಿಲ್ಲಾ ಆರೋಗ್ಯ ಅಧಿಕಾರಿಗಳ ಜತೆ ವರ್ಚುವಲ್ ಸಭೆ ನಡೆಸಿ ಕೋವಿಡ್ ಕುರಿತು ನಿಗಾ ಇಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವರ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳೊಂದಿಗೆ ಸಭೆ ನಡೆಸಲಾಗುತ್ತಿದೆ.
Key words: Corona -scare – 5 thousand -covid test – state -every day.