ಮೈಸೂರು,ಜು,11,2020(www.justkannada.in): ಮೈಸೂರಿನಲ್ಲಿ ಸಮುದಾಯಕ್ಕೆ ಕೊರೋನ ಹರಡುತ್ತಿದೆ ಕೊರೊನಾ ಸಂಬಂಧ ಯಾವುದೇ ಪರಿಸ್ಥಿತಿ ಎದುರಾದರೂ ಎದುರಿಸಲು ಸಜ್ಜಾಗಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್ ಎನ್.ಆರ್.ಕ್ಷೇತ್ರದಲ್ಲಿ ಕೊರೋನ ಹೆಚ್ಚಳವಾಗಿದೆ. ಎನ್.ಅರ್. ಕ್ಷೇತ್ರದಲ್ಲಿ ಸಮುದಾಯ ಹರಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಸಂಪೂರ್ಣ ಕ್ಷೇತ್ರವನ್ನು ಮಿನಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇದೆ. ಈ ಭಾಗದಲ್ಲಿ ಸೊಂಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿನ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ. ನಮ್ಮ ಅಧಿಕಾರಿಗಳಿಗೆ, ವೈದ್ಯಕೀಯ ಸಿಬ್ಬಂದಿಗೆ ಸಹಕಾರ ನೀಡುತ್ತಿಲ್ಲ. ಅಲ್ಲಿನ ಜನಪ್ರತಿನಿಧಿಗಳು, ಸಮುದಾಯದ ಮುಖಂಡರೊಂದಿಗೆ ಮಾತನಾಡಿ ನಿರ್ಧಾರ ಮಾಡಲಾಗುತ್ತದೆ. ಕೊರೋನಾ ನಿಯಂತ್ರಣಕ್ಕೆ ಮಿನಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ನ ಸೋಂಕು ನಿಯಂತ್ರಣ ತಪ್ಪಿಲ್ಲ. ಆದರೆ ಮೈಸೂರು ಜಿಲ್ಲೆಯಲ್ಲಿ ದಿನ ಕಳೆದಂತೆ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಳ ಮಾಡಲಾಗುತ್ತಿದೆ. ಮಂಡಕಳ್ಳಿಯಲ್ಲಿ ಸಿದ್ದಗೊಂಡಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ 500 ಕ್ಕೂ ಹೆಚ್ಚು ಬೆಡ್ ಗಳಿವೆ. ಕೊರೊನಾ ಸಂಬಂಧ ಯಾವುದೇ ಪರಿಸ್ಥಿತಿ ಎದುರಾದರೂ ಎದುರಿಸಲು ಸಜ್ಜಾಗಿದ್ದೇವೆ. ಜನರು ಭಯ ಪಡುವ ಅಗತ್ಯವಿಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
Key words: Corona- spread – community – Mysore-Minister- ST Somashekhar.