ಮೈಸೂರು,ಜು,7,2020(www.justkannada.in): ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆ ಪಾಲಿಕೆಯನ್ನ ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲು ಸೂಚನೆ ನೀಡಲಾಗಿದೆ.
ಮೈಸೂರು ಮಹಾನಗರ ಪಾಲಿಕೆ ಹೆಲ್ತ್ ಸೆಕ್ಷನ್ ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನೆಲೆ ಪಾಲಿಕೆಯ ಆರೋಗ್ಯ ವಿಭಾಗ ಸೇರಿ ಎರಡು ದಿನ ಪಾಲಿಕೆಯೇ ಸೀಲ್ ಡೌನ್ ಮಾಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ.ನಾಗರಾಜ್ ಮಾಹಿತಿ ನೀಡಿದ್ದಾರೆ.
ಪಾಲಿಕೆ ಕಟ್ಟಡಕ್ಕೆ ಅಧಿಕಾರಿಗಳ ನೇತೃತ್ವದಲ್ಲಿ ಔಷಧಿ ಸಿಂಪಡಣೆಗೆ ಮುಂದಾಗಿದ್ದು ಪಾಲಿಕೆ ಸಿಬ್ಬಂದಿ ನಿಕಟ ಸಂಪರ್ಕದಲ್ಲಿದ್ದವರಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.ಇನ್ನು ಕೊರೋನಾ ಸೋಂಕಿತ ಸಿಬ್ಬಂದಿ ಪಾಲಿಕೆ ಆಯುಕ್ತರನ್ನ ಭೇಟಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಪಾಲಿಕೆ ಆಯುಕ್ತರು ಸಹ ಹೋಮ್ ಕ್ವಾರೈಂಟೈನ್ ಆಗಿದ್ದಾರೆ. ಜತೆಗೆ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಜಯಂತ್ ಸಹ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಸದ್ಯ ಇಂದು ಎಲ್ಲರು ತಪಾಸಣೆಗೆ ಒಳಗಾಗುವ ಸಾಧ್ಯತೆ ಇದ್ದು, ಪಾಲಿಕೆ ಇತರೇ ಸಿಬ್ಬಂದಿಗಳಲ್ಲಿ ಇದೀಗ ಕೊರೋನಾ ಆತಂಕ ಹೆಚ್ಚಾಗಿದೆ. ಇನ್ನು ಸ್ಯಾನಿಟೈಸ್ ಮಾಡಿದ ಬಳಿಕ ಮೈಸೂರು ಪಾಲಿಕೆಯನ್ನ ಎರಡು ದಿನಗಳ ಕಾಲ ಸೀಲ್ಡೌನ್ ಮಾಡಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಡಾ.ನಾಗರಾಜ್ ಮಾಹಿತಿ ನೀಡಿದ್ದಾರೆ.
Key words: Corona –staff-Mysore city corporation-Seal Down.