ಬೆಂಗಳೂರು,ಡಿಸೆಂಬರ್,23,2020(www.justkannada.in): ಕೋವಿಡ್-19 ಹೊಸ ರೂಪಾಂತರ ಪತ್ತೆಯಾದ ಹಿನ್ನೆಲೆ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲಿದ್ದು, ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಬ್ರಿಟನ್ ನಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
English summary….
Night curfew from today in Karnataka
Bengaluru, Dec. 23, 2020 (www.justkannada.in): Chief Minister B.S. Yedyurappa has announced a night curfew across the state from today following reports of a new coronavirus strain.
Addressing a press meet in Bengaluru, he said, “the night curfew will be from 10 pm to 6 am, till January 2, 2021. This measure has been taken because of the new coronavirus strain and as an effort to prevent its spread.”
Keywords: New Corona virus strain/ Chief Minister B.S. Yedyurappa/ night curfew
Key words: corona- statewide- night curfew – effect – today-cm bs yeddyurappa