“ಸಂಸದರಿಗೆ ಕೊರೊನಾ ಪರೀಕ್ಷೆ ಕಡ್ಡಾಯ” : ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಬೆಂಗಳೂರು,ಜನವರಿ,20,2021(www.justkannada.in) : ಬಜೆಟ್ ಅಧಿವೇಶನ ಇನ್ನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಸಂಸದರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕೆಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು.

jkಬಜೆಟ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಓಂ ಬಿರ್ಲಾ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ.

ಸಂಸದರಿಗೆ ಕೊರೊನಾ ಪರೀಕ್ಷೆ ನಡೆಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಜನವರಿ 27ರಿಂದ ಸಂಸತ್ತಿನ ಆವರಣದಲ್ಲಿಯೇ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಎಲ್ಲಾ ಸಂಸದರು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕಿದೆ ಎಂದಿದ್ದಾರೆ.

 

ಜನವರಿ 29ರಿಂದ ಸಂಸತ್ತಿನ ಅಧಿವೇಶನ ಆರಂಭಗೊಳ್ಳುತ್ತಿದೆ. ಸಂಸತ್ತಿನ ಆವರಣದಲ್ಲಿ ಎರಡು ದಿನಗಳ ಕಾಲ ಪರೀಕ್ಷೆ ನಡೆಸಲಾಗುವುದು. ಕೊರೊನಾ ಸೋಂಕು ಹರಡುವಿಕೆ ತಡೆಗೆ ಸಂಬಂಧಿಸಿದಂತೆ ಎಲ್ಲಾ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಎಲ್ಲವೂ ಕಡ್ಡಾಯ ಎಂದರು.

Corona-test-mandatory-MPs-LokSabha-Speaker-Om Birlaಸಂಸದರ ನಿವಾಸದ ಬಳಿಯೂ ಕೊರೊನಾ ಪರೀಕ್ಷೆ ನಡೆಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ. ಜನವರಿ 29ರಿಂದ ಫೆಬ್ರುವರಿ 15ರವರೆಗೆ ಹಾಗೂ ಮಾರ್ಚ್ 8ರಿಂದ ಏಪ್ರಿಲ್ 8ರವರೆಗೆ ನಡೆಯಲಿದೆ ಎಂದು ತಿಳಿಸಿದರು.

 

key words : Corona-test-mandatory-MPs-LokSabha-Speaker-Om Birla