ಮೈಸೂರು,ಸೆಪ್ಟಂಬರ್,11,2020(www.justkannada.in): ದೇಶ ಮತ್ತು ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚಾಗಿ ಹರಡುತ್ತಿದ್ದು ಇತ್ತೀಚೆಗೆ ವಿದೇಶದ ಮೃಗಾಲಯವೊಂದರಲ್ಲಿ ಹುಲಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಗಳು ಕಂಡು ಬಂದಿತ್ತು. ಹೀಗಾಗಿ ಪ್ರಾಣಿಗಳಿಗೂ ಕೊರೋನಾ ಆತಂಕ ಕಾಡುತ್ತಿದೆ.
ಈ ಹಿನ್ನೆಲೆ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೂ ಕೊರೋನಾ ಟೆಸ್ಟ್ ನಡೆಸುವ ಸಾಧ್ಯತೆ ಇದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಡಿಸಿಎಫ್ ( ಉಪ ಅರಣ್ಯ ಸಂರಕ್ಷಣಾಧಿಕಾರಿ ) ಎಂ.ಸಿ ಅಲೆಗ್ಸಾಂಡರ್, ದಸರಾ ಆನೆಗಳ ಬಗ್ಗೆಯೂ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುವುದು. ಅವಶ್ಯಕತೆ ಬಿದ್ದರೆ ಆನೆಗಳಿಗೂ ಕೊರೊನಾ ಟೆಸ್ಟ್ ಮಾಡಲಾಗುತ್ತದೆ. ಈ ಬಗ್ಗೆ ತಜ್ಜರ ಸಲಹೆಗಾಗಿ ಮುಖ್ಯ ಅರಣ್ಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ಅರಮನೆಗೆ ಬಂದ ನಂತರ ಪರೀಕ್ಷೆ ಮಾಡಿಸಬೇಕಾ ಅಥವಾ ಮೊದಲೇ ಪರೀಕ್ಷೆ ಮಾಡಿಸಬೇಕಾ .ಈ ಬಗ್ಗೆ ತಜ್ಞರ ಹಿರಿಯ ಅಧಿಕಾರಿಗಳ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಂ.ಸಿ ಅಲೆಗ್ಸಾಂಡರ್ ಸ್ಪಷ್ಟನೆ ನೀಡಿದ್ದಾರೆ.
Key words: Corona test – Mysore- Dasara-elephants