ಬೆಂಗಳೂರು,ಜು,6,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಎಲ್ಲಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಲವು ಸಮಸ್ಯೆಗಳು ಕಂಡು ಬರುತ್ತಿದೆ. ಹೀಗಾಗಿ ಸರ್ಕಾರ ಗಂಭೀರ ಪ್ರಕರಣಗಳನ್ನು ಹೊರತುಪಡಿಸಿ ಉಳಿದವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಮುಂದಾಗಿದೆ.
ಇನ್ಮುಂದೆ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಮನೆಯಲ್ಲೇ ಚಿಕಿತ್ಸೆ ಸಿಗಲಿದ್ದು, ಪ್ರತ್ಯೇಕವಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುವ ಬಗ್ಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಪ್ರಕಾರ ಇತರೇ ಕಾಯಿಲೆಗಳಿಲ್ಲದ ವ್ಯಕ್ತಿಗಳಿಗೆ ಕೊರೋನಾ ಸೋಂಕು ಕಂಡು ಬಂದರೇ ಹಾಗೂ ಕೊರೋನಾ ಗುಣಲಕ್ಷಣಗಳಿಲ್ಲದ ಸೋಂಕಿತ ವ್ಯಕ್ತಿಗಳಿಗೆ ಹೋಂ ಐಸೊಲೇಷನ್ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಇನ್ನು ವೃದ್ದರಿಗೆ ಹಾಗೂ ಮಕ್ಕಳಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಸಿಗಲಿದೆ.
ಕೊರೋನಾ ಸೋಂಕಿತರ ಮನೆಗೆ ಆರೋಗ್ಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹೋಂ ಐಸೊಲೇಷನ್ ಗೆ ಅವಕಾಶ ಮಾಡಿಕೊಡಲಾಗುತ್ತದೆ. ಬಳಿಕ ಪ್ರತಿದಿನ ಹೋ ಐಸೊಲೇಷನ್ ವ್ಯಕ್ತಿಗಳ ಆರೋಗ್ಯ ಸ್ಥಿತಿ ಬಗ್ಗೆ ಆರೋಗ್ಯ ಸಿಬ್ಬಂದಿ ಮಾಹಿತಿ ಕಲೆ ಹಾಕಲಿದ್ದಾರೆ.
ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಈ ಮೂಲಕ ಗಂಭೀರ ಪ್ರಕರಣಗಳನ್ನು ಹೊರತುಪಡಿಸಿ ಉಳಿದವರಿಗೆ ಮನೆಯಲ್ಲೇ ಚಿಕಿತ್ಸೆ ದೊರೆಯಲಿದೆ.
Keywords: corona –treatment-home- Isolation-govrnment