ಬೆಂಗಳೂರು,ಫೆಬ್ರವರಿ,13,2021(www.justkannada.in): ಕೊರೊನಾ ಲಸಿಕೆ ಪಡೆಯಲು ನಿರಾಕರಿಸಿದವರಿಗೆ ನಂತರ ಸೋಂಕು ಕಾಣಿಸಿಕೊಂಡರೆ ಅಂತಹವರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸುವುದಿಲ್ಲ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದರು.
ಈಗಾಗಲೇ ಆರೋಗ್ಯ ಇಲಾಖೆ ಮತ್ತು ಫ್ರಂಟ್ಲೈನ್ ವಾರಿಯರ್ಸ್ಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಆದರೂ, ಕೆಲವರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ.
ಈ ವಿಷಯ ಗಮನದಲ್ಲಿಟ್ಟುಕೊಂಡು ಉಚಿತ ಲಸಿಕೆ ಪಡೆಯಲು ನಿರಾಕರಿಸುವವರಿಗೆ ನಂತರ ಸೋಂಕು ಕಾಣಿಸಿಕೊಂಡರೆ ಅಂತಹವರ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಿಲ್ಲ ಎಂಬ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.
key words : Corona Vaccine-Refuse-Treatment-costs-BBMP-not bear-BBMP Commissioner-Manjunath