ಬೆಂಗಳೂರು,ಮಾ,19,2020(www.justkannada.in): ಕೊರೋನಾ ವೈರಸ್ ಭೀತಿ ಹಿನ್ನೆಲೆ ಬಿಬಿಎಂಪಿ 200 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಅದು ಕೇವಲ ಕೋವಿಡ್-19 ಗೆ ಮಾತ್ರ ಸೀಮಿತವಾಗಿರಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಸುಧಾಕರ್ , ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಈಗಾಗಲೇ ಟಾಸ್ಕ್ ಪೋರ್ಸ್ ರಚನೆ ಮಾಡಲಾಗಿದೆ. ಇಂದು ಟಾಸ್ಕ್ ಪೋರ್ಸ್ನ ಮೊದಲ ಸಭೆ ನಡೆಯಲಿದೆ. ಕೊರೋನಾ ಭೀತಿ ಹಿನ್ನೆಲೆ, ಬಿಬಿಎಂಪಿ ಈಗಾಗಲೇ 200 ಹಾಸಿಗೆಗಳಿರುವ ಆಸ್ಪತ್ರೆ ಕಟ್ಟಿಸಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ.ಅದನ್ನ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾತ್ರ ಬಳಸಲಾಗುತ್ತದೆ ಎಂದರು.
ಹಾಗೆಯೇ ಬೌರಿಂಗ್ ಆಸ್ಪತ್ರೆಯಲ್ಲಿ ಬ್ರಾ ಡ್ ವೇ ನಿರ್ಮಾಣ ಮಾಡಲಾಗಿದೆ. ಇಂದು ಅದು ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡುತ್ತೇವೆ. ರಾಜ್ಯದಲ್ಲಿ ಐದು ಕಡೆ ಲ್ಯಾಬ್ ಟೆಸ್ಟಿಂಗ್ ಇದೆ. ಪ್ರತಿದಿನ 500 ಸ್ಯಾಂಪಲ್ಗಳ ಪರೀಕ್ಷೆ ನಡೆಯುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ವದಂತಿಗೆ ಆಸ್ಪದ ನೀಡಬೇಡಿ ಎಂದು ಸಚಿವ ಡಾ.ಕೆ ಸುಧಾಕರ್ ಸಲಹೆ ನೀಡಿದರು.
Key words: Corona virus- 200-bed -hospital -construction – BBMP.