ಬೆಂಗಳೂರು,ಜೂ,3,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಮಹಾಮಾರಿ ಕರೊನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು ಈ ಹಿನ್ನೆಲೆ ಆರೋಗ್ಯ ಇಲಾಖೆ ಕ್ವಾರಂಟೈನ್ ಅವಧಿ ವಿಸ್ತರಣೆ ಮಾಡಿದೆ.
ರಾಜ್ಯದಲ್ಲಿ ಮಹಾರಾಷ್ಟ್ರದಿಂದ ಬಂದವರಿಂದಲೇ ಅತಿಹೆಚ್ಚು ಕೊರೋನಾ ಪ್ರಕರಣ ಪತ್ತೆಯಾಗಿದ್ದು ಹೀಗಾಗಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರಿಗೆ ಕ್ವಾರಂಟೈನ್ ಅವಧಿ ವಿಸ್ತರಣೆ ಮಾಡಲಾಗಿದೆ. 21 ದಿನಗಳವರೆಗೆ ಕ್ವಾರಂಟೈನ್ ಅವಧಿಯನ್ನು ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.
ಮಹಾರಾಷ್ಟ್ರದಿಂದ ಬಂದವರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮತ್ತು 14 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಈ ಹಿಂದೆ ಕ್ವಾರೆಂಟೈನ್ ಅವಧಿ14 ದಿನಗಳವರೆಗಿತ್ತು. ರಾಜ್ಯದಲ್ಲಿ ಕಂಡುಬರುತ್ತಿರುವ ಪ್ರಕರಣಗಳ ಪೈಕಿ ಬಹುತೇಕ ಪ್ರಕರಣಗಳಿಗೆ ಮಹಾರಾಷ್ಟ್ರ ಲಿಂಕ್ ಹಿನ್ನೆಲೆ, ಕ್ವಾರಂಟೈನ್ ಅವಧಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Key words: coronavirus -Health Department -extended -Quarantine