ನವದೆಹಲಿ,ಸೆಪ್ಟಂಬರ್,5,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 86,432 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಅನ್ ಲಾಕ್ 4.0 ದೇಶದಲ್ಲಿ ಜಾರಿಯಲ್ಲಿದ್ದು ಶಾಲಾ ಕಾಲೇಜುಗಳು ಸಿನಿಮಾ ಥಿಯೇಟರ್ ಬಿಟ್ಟು ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿದೆ.
ಕಳೆದ 24 ಗಂಟೆಯಲ್ಲಿ 86,432 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 40,23,179ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಕೊರೋನಾದಿಂದಾಗಿ ಒಂದೇ ದಿನ 1,089 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 69,561ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 31,07,223 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸದ್ಯ 8,46,395 ಸಕ್ರಿಯ ಪ್ರಕರಣಗಳಿವೆ.
Key words: Coronavirus- number- crossing -40 lakh -borders – country.