ನವದೆಹಲಿ,ಮಾ,3,2020(www.justkannada.in): ವಿಶ್ವವನ್ನೇ ತಲ್ಲಣಗೊಳಿಸುತ್ತಿರುವ ಮಹಾ ಮಾರಕ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು ಇಬ್ಬರಲ್ಲಿ ಪತ್ತೆಯಾಗಿದೆ. ಈ ನಡುವೆ ದೇಶದ ಜನರಲ್ಲಿ ಕೊರೋನಾ ವೈರಸ್ ಬಗ್ಗೆ ಭೀತಿ ಹೆಚ್ಚಾಗಿದ್ದು ಈ ಹಿನ್ನೆಲೆ ದೇಶದ ಜನರಿಗೆ ಪ್ರಧಾನಿ ಮೋದಿ ಧೈರ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ವೈರಸ್ ಬಗ್ಗೆ ದೇಶದ ಜನರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ವಿಶ್ವಾಸದಿಂದಿರಿ. ಕೊರೋನಾ ಬಗ್ಗೆ ಯಾವುದೇ ಆತಂಕ ಬೇಡ. ಯಾರೂ ಭಯಪಡಬೇಕಿಲ್ಲ. ಭ್ರಮನಿರಸನ ಆಗುವ ಅವಶ್ಯಕತೆ ಇಲ್ಲ. ಅದರ ನಿಯಂತ್ರಣಕ್ಕೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ತಿಳಿಸಿದ್ದಾರೆ.
ಹಾಗೆಯೇ ಕೊರೊನಾ ತಡೆಯಲು ನಮ್ಮನ್ನು ನಾವು ಮೊದಲು ರಕ್ಷಿಸಿಕೊಳ್ಳಬೇಕಿದೆ. ಹೀಗಾಗಿ ನಮ್ಮ ಕೈ ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಸಾರ್ವಜನಿಕ, ಜನನಿಬಿಡ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು ಎಂಬ ಸಲಹೆಗಳುಳ್ಳ ಒಂದು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ಮೊದಲು ಚೀನಾದಲ್ಲಿ ಶುರುವಾದ ಕೊರೊನಾ ವೈರಸ್ ನಂತರ ವಿಶ್ವದಾದ್ಯಂತ ಹರಡಿದ್ದು ಭಾರತಕ್ಕೂ ಕಾಲಿಟ್ಟಿದೆ. ಈಗ ದೆಹಲಿ ಮತ್ತು ತೆಲಂಗಾಣದಲ್ಲಿ ಇಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ.
Key words: coronavirus- Prime Minister- Narendra Modi – courage- people – country.