ಬೆಂಗಳೂರು, ಜನವರಿ 15, 2021(www.justkannada.in): ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವ ಸುಧಾಕರ್ ಮಾಧ್ಯಮಗಳ ಜತೆ ಮಾತನಾಡಿದರು.
ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಲಸಿಕೆ ನೀಡಲು ಮೊದಲಿಗೆ ಜನಪ್ರತಿನಿಧಿಗಳನ್ನೇ ಆರಿಸಬಹುದಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಿಗೆ ಮೊದಲ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತಿದೆ. ಬಳಿಕ ಇತರೆ ರೋಗಗಳಿಂದ ಬಳಲುವವರಿಗೆ ಲಸಿಕೆ ನೀಡಲಾಗುವುದು ಎಂದರು.
7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಮಂದಿಗೆ ನೀಡುವ ಗುರಿ ಇದೆ. ನಮ್ಮಲ್ಲಿ ಒಟ್ಟು 8,14,500 ಡೋಸ್ ಲಸಿಕೆ ಲಭ್ಯವಿದ್ದು, ಒಂದು ವಾರದೊಳಗೆ ಮೊದಲ ಹಂತದ ವಿತರಣೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಸರ್ಕಾರಿ ಮಾಹಿತಿ ಮಾತ್ರ ನಂಬಿ…
ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಸುಧಾಕರ್ ಸ್ಪಷ್ಟಪಡಿಸಿದರು.
ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ.
ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ. ಎಂದು ಸುಧಾಕರ್ ತಿಳಿಸಿದರು.
ENGLISH SUMMARY….
Vaccine will be distributed at 243 centres across the state, Covishield at 237 and Covaxin at 6 places: Health & Medical Education Minister Dr.K.Sudhakar
8,14,500 doses of Vaccine available; PM to inaugurate Vaccination Drive in Bengaluru
Bengaluru – January 15, 2021: 243 centres have been prepared for the launch of first phase of vaccination drive across the state on January 16, including 10 centres in Bengaluru said Health & Medical Education Minister Dr.K.Sudhakar. He was speaking to the media after holding a video conference with DCs, ZP CEOs and district health officers regarding vaccination drive.
PM Modi will inaugurate the vaccination drive in Bengaluru Medical College on Saturday and another 9 centres have been prepared in the capital for the purpose he said. Some private hospitals like St. Johns Medical college have also been included in this initiative. Covi-shield will be distributed in 237 centres and covaxin in 6 centres in Bellary, Shivamogga, Hassan, Chikmagalur, Chamarajnagar and Davanegere, said the Minister.
Politicians would have been given the vaccine in the first phase, but health warriors who are in the front run in the fight against Corona will be given priority. Persons with comorbidity is next in the priority. Said Dr.Sudhakar.
Total 7,17,439 health warriors will be vaccinated in the initial phase and we are aiming to vaccinate 24,300 people on the first day itself. We have 8,14,500 doses of vaccine and the initial phase is exoected to complete within a week said the Minister.
Believe in information from Government sources
There will be emergency medical service available at the site of vaccination if, any side effects occurs to anybody. People are being mis-leaded by the rumours spreading in social media. Only information provided in official government handles are authenticated, he clarified.
Other Points made by the Minister
• Health warriors, Police staff and poura karmikas have been registered in the first phase. Vaccine is completely safe.
• 2nd dose will be given after the first dose. People are requested to take the vaccine without any fear.
• 10 walk-in coolers, 4 walk-in freezers, 3,210 ILRs, 3,312 cold boxes, 46,591 vaccine carriers and 2,25,749 ice packs are available.
Key words: Coronavirus Vaccines- Delivery – 243 place-State –Tomorrow-Minister- Dr. K. Sudhakar.