ಮೈಸೂರು, ಸೆಪ್ಟೆಂಬರ್,05, 2020(www.justkannada.in) ; ಪ್ರಸ್ತುತ ಕೊರೊನಾ ಭೀಕರ ವಾತಾವರಣದಲ್ಲಿ ಜನಸಮುದಾಯ ಧ್ವನಿ ಎತ್ತದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾಹಿತಿ ದೇವನೂರು ಮಹಾದೇವ ಆತಂಕವ್ಯಕ್ತಪಡಿಸಿದರು.
ಸಿದ್ಧಾರ್ಥನಗರದ ಕನಕ ಭವನದಲ್ಲಿ ಶನಿವಾರ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ಆಯೋಜಿಸಿದ್ದ ‘’ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕುರಿತು ಸಂವಾದ’’, ”ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ಪರಿಣಾಮ ಹಾಗೂ ಸವಾಲುಗಳ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಅವೈಜ್ಞಾನಿಕ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಪ್ರಸ್ತುತ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿ ಮುಖಂಡರು ಉಪಸ್ಥಿತರಿದ್ದರು.
key words : corporate-firms-All-around-Central-Government-Dema-Kidi