ಹಾವೇರಿ, ನವೆಂಬರ್,5,2024 (www.justkannada.in): ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಭ್ರಷ್ಟಾಚಾರ ವಿರುದ್ದ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಅಬಕಾರಿ ಇಲಾಖೆಯಲ್ಲಿ ಯಾವ ಭ್ರಷ್ಟಾಚಾರ ಆಗಿದೆ. ಏನು ಭ್ರಷ್ಟಾಚಾರ ಆಗಿದೆ ಎಂದು ನನಗೆ ಗೊತ್ತಿಲ್ಲ. ಆರೋಪ ಮಾಡಿದ್ದೆಲ್ಲವೂ ನಿಜನಾ? ಎಂದು ಪ್ರಶ್ನಿಸಿದರು.
ನಮ್ಮ ಇಲಾಖೆಯಲ್ಲಿ ಯಾರು ಕಿರುಕುಳ ನೀಡಿದ್ದಾರೆಂದು ಹೇಳಲಿ. ಲಂಚ ಪಡೆದ ಅಧಿಖಾರಿಗಳ ಪಟ್ಟಿಯನ್ನು ನನಗೆ ಕೊಡಲಿ ಎಂದು ಆರ್ ಬಿ ತಿಮ್ಮಾಪುರ ತಿಳಿಸಿದ್ದಾರೆ.
Key words: corruption, Excise Department, Minister, RB Thimmapura