ಮುಡಾದಲ್ಲಿ ಭ್ರಷ್ಟಾಚಾರ ಆರೋಪ: ಸಚಿವ ಭೈರತಿ ಸುರೇಶ್ ಮೀಟಿಂಗ್

ಮೈಸೂರು,ಜುಲೈ,1,2024 (www.justkannada.in):  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು  ಈ ಸಂಬಂಧ ಮುಖ್ಯಕಾರ್ಯದರ್ಶಿಗೆ ದೂರು ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಇಂದು ಸಭೆ ನಡೆಸಿ ಚರ್ಚಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟು ಅಕ್ರಮ ಆರೋಪ ಕೇಳಿ ಬಂದಿದ್ದು,  50:50 ಅನುಪಾತದ ನೆಪದಲ್ಲಿ ನಡೆದಿರುವ ಬಹುಕೋಟಿ ಹಗರಣದ ಬಗ್ಗೆ ಸಿಎಸ್‌ ಗೆ ದೂರು ಸಲ್ಲಿಕೆಯಾಗಿತ್ತು.  ದೂರು ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತಿದ್ದು  ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ.

ಸಭೆಯಲ್ಲಿ ಮೂಡಾ ಸದಸ್ಯರಾದ ಮೈಸೂರಿನ ಶಾಸಕರು, ಪರಿಷತ್ತು ಸದಸ್ಯರು, ಅಧಿಕಾರಿಗಳು ಭಾಗಿಯಾಗಿದ್ದರು.  ಸಭೆ ಹಿನ್ನೆಲೆಯಲ್ಲಿ ಮುಡಾ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇಬ್ಬರು ಎಸಿಪಿ, ನಾಲ್ವರು ಇನ್ಸ್ ಪೆಕ್ಟರ್, ಐವರು ಸಬ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Key words: Corruption, Muda, Minister, Bhairati Suresh, meeting