ನವದೆಹಲಿ,ಜನವರಿ,30,2023(www.justkannada.in): ನನ್ನ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ತಾಕತ್ತಿದ್ದರೇ ಈ ಬಗ್ಗೆ ಅವರು ನ್ಯಾಯಾಂಗ ತನಿಖೆಗೆ ಆದೇಶಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರವೆಂದು ಹೇಳುತ್ತಿದ್ದಾರೆ. ಪ್ರಧಾನಿ ಮೋದಿಗೆ ಗುತ್ತಿಗೆದಾರರ ಸಂಘದಿಂದ ಪತ್ರ ಬರೆದಿದ್ದಾರೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕ್ರಮ ಕೈಗೊಂಡಿದ್ದಾರಾ…? ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡರು. ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡರು. ತುಮಕೂರಲ್ಲಿ ಗುತ್ತಿಗೆದಾರ ಟಿ.ಎನ್ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡರು. ಸರ್ಕಾರದ 40 ಪರ್ಸೆಂಟ್ ಕಮಿಷನ್ ಗೆ ಇಷ್ಟು ಸಾಕಲ್ವಾ ಸಾಕ್ಷ್ಯ ಎಂದು ಕಿಡಿಕಾರಿದರು.
ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಮಾಡಲ್ಲ ಎಂದಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ಕೋಲಾರದಲ್ಲಿ ನನ್ನ ಸ್ಪರ್ಧೆ ಬಗ್ಗೆ ಹೇಳಲು ಬಿಎಸ್ ವೈ ಯಾರು…? ಎಂದು ಪ್ರಶ್ನಿಸಿದರು.
ಜೆಡಿಎಸ್ ಆಂತರಿಕ ವಿಚಾರದ ಬಗ್ಗೆ ನಾನು ಪ್ರತಿಕ್ರಿಯಿಸಿಲ್ಲ. ಹಾಸನದಿಂದ ಭವಾನಿಯಾದರೂ ಸ್ಪರ್ಧಿಸಲಿ ಯಾರಾದರೂ ಸ್ಪರ್ಧಿಸಲಿ ನನಗ್ಯಾಕೆ ಎಂದು ಸಿದ್ಧರಾಮಯ್ಯ ಹೇಳಿದರು.
Key words: Corruption- order – judicial- inquiry- Siddaramaiah- challenge-bjp