ಉತ್ತರ ಪ್ರದೇಶ,ಆಮ,4,2020(www.justkannada.in): ಅಯೋಧ್ಯೆ ಶ್ರೀರಾಮಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದ ಎಲ್ಲಾ ಸಿದ್ಧತೆ ನಡೆದಿದ್ದು ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ.
ಇಂದು ಪ್ರಧಾನಿ ಮೋದಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದು, ಶಿಲಾನ್ಯಾಸ ಕಾರ್ಯಕ್ರಮ ದೇಶಾದ್ಯಂತ ಹಬ್ಬದ ವಾತಾವರಣವನ್ನು ನಿರ್ಮಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈಗಾಗಲೇ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಖನೌಗೆ ಹೊರಟಿದ್ದು, ಸ್ವಲ್ಪ ಹೊತ್ತಿನಲ್ಲೇ ಲಖನೌಗೆ ತಲುಪಲಿದ್ದಾರೆ.
ನಂತರ ಪ್ರಧಾನಿ ಮೋದಿ ಹನುಮಾನ್ ದೇವಾಲಯ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದು ಹೀಗಾಗಿ ದೇವಾಲಯ ಸ್ಯಾನಿಟೈಸ್ ಮಾಡಲಾಗಿದೆ. ಮೋದಿ ಅವರು ರಾಮಮಂದಿರದ ಭೂಮಿಪೂಜೆಗೂ ಮುನ್ನ ಅಲ್ಲಿಯೇ ಒಂದು ಗಿಡವನ್ನು ನೆಡಲಿದ್ದಾರೆ. ಕೃಷ್ಣಪ್ರಿಯ ಪಾರಿಜಾತ. ದೇವ ವೃಕ್ಷವೆಂದೇ ಕರೆಯಲ್ಪಡುವ ಈ ಗಿಡವನ್ನು ನೆಡುವ ಮೂಲಕ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಲಿದ್ದಾರೆ.
ಭೂಮಿ ಪೂಜೆಯಲ್ಲಿ ಪ್ರಧಾನಿ ಮೋದಿ, ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್, ಆರ್ ಎಸ್ ಎಸ್ ಮುಖ್ಯಸ್ಥ ಭಾಗವತ್ , ಉತ್ತರಪ್ರದೇಶ ಗವರ್ನರ್ ಆನಂದಿಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Countdown – Bhoomi Pooja – construction – Ram Mandir -Ayodhya.