ಮೈಸೂರು, ಅಕ್ಟೋಬರ್ 15, 2023(www.justkannada.in): ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದೆ.
416ನೇ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗ್ಗೆ 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡಹಬ್ಬ ಉದ್ಘಾಟನೆ ಮಾಡಲಾಗುತ್ತದೆ.
ಚಾಮುಂಡಿ ಬೆಟ್ಟದಲ್ಲಿ ನಾದ ಬ್ರಹ್ಮ ಹಂಸಲೇಖರಿಂದ ದಸರೆಗೆ ಚಾಲನೆ ಸಿಗಲಿದೆ. ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ಸಿಗಲಿದೆ.
ಇಂದಿನ ದಸರಾ ಮಹೋತ್ಸವದ ಕಾರ್ಯಕ್ರಮಗಳು.
*ಬೆಳಿಗ್ಗೆ 11:30ಕ್ಕೆ ಸಚಿವ ಡಾ. ಡಾ.ಎಚ್.ಸಿ ಮಹದೇವಪ್ಪ ಅವರಿಂದ ಕಲಾಮಂದಿರದಲ್ಲಿ ಚಲನ ಚಿತ್ರೋತ್ಸವ ಉದ್ಘಾಟನೆ.
* 12:30 ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಲಿರುವ ಸಚಿವ ಹೆಚ್.ಸಿ. ಮಹದೇವಪ್ಪ.
* ಮಧ್ಯಾಹ್ನ 1 ಗಂಟೆಗೆ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ ಉದ್ಘಾಟನೆ.
* ಸಂಜೆ 4 ಗಂಟೆಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ.
* ಸಂಜೆ 4:30ಕ್ಕೆ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿರುವ ಸಿಎಂ.
* ಸಂಜೆ 5 ಗಂಟೆಗೆ ಸೆನೆಟ್ ಭವನದಲ್ಲಿ ಯೋಗ ದಸರಾ ಉದ್ಘಾಟನೆ ಮಾಡಲಿರುವ ಸಚಿವ ಡಾ. ಹೆಚ್.ಸಿ ಮಹದೇವಪ್ಪ.
* 5 ಗಂಟೆಗೆ ಕಲಾಮಂದಿರದಲ್ಲಿ ಅಖಿಲ ಭಾರತ ಹಾಗೂ ರಾಜ್ಯ ಮಟ್ಟದ ಚಿತ್ರ ಶಿಲ್ಪ ಕಲಾ ಪ್ರದರ್ಶನ ಉದ್ಘಾಟನೆ.
ಸಚಿವ ಶಿವರಾಜ್ ತಂಗಡಗಿ ಯಿಂದ ಉದ್ಘಾಟನೆ.
* 5 ಗಂಟೆಗೆ ಓವಲ್ ಮೈದಾನದಲ್ಲಿ ಪುಸ್ತಕ ಮಾರಾಟ ಮೇಳ ಹಾಗೂ 5:30 ಕ್ಕೆ ಕಲಾಮಂದಿರದ ರಂಗಾಯಣದಲ್ಲಿ ನವರಾತ್ರಿ ರಂಗೋತ್ಸವ ಉದ್ಘಾಟನೆ ಮಾಡಲಿರುವ ಸಚಿವ ಶಿವರಾಜ್ ತಂಗಡಗಿ.
*ಸಂಜೆ 6:30ಕ್ಕೆ ವಿದ್ಯುತ್ ದೀಪಾಲಂಕಾರ ಕಾರ್ಯಕ್ರಮ ಉದ್ಘಾಟನೆ ಮಾಡಲಿರುವ ಇಂಧನ ಸಚಿವ ಕೆ.ಜೆ ಜಾರ್ಜ್.
* ಸಂಜೆ 7 ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ.