ಬೆಂಗಳೂರು,ಮೇ,31,2019(www.justkannada.in): ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕಂಟ್ರಿಮೇಡ್ ಗ್ರೆನೇಡ್ ಎಂಬುದು ಪರಿಶೀಲನೆ ವೇಳೆ ತಿಳಿದು ಬಂದಿದೆ.
ರೈಲ್ವೆ ನಿಲ್ದಾಣದ ಫ್ಲಾಟ್ ಫಾರ್ಮ್ 1ರಲ್ಲಿ ಅನುಮಾನಸ್ಪದ ವಸ್ತು ಪತ್ತೆಯಾದ ಬಗ್ಗೆ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯಾ ದಳ ಮತ್ತು ಬಾಂಬ್ ಪತ್ತೆ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದೆ. ಈ ನಡುವೆ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕಂಟ್ರಿ ಮೇಡ್ ಗ್ರೆನೆಡ್ ಎಂದು ತಿಳಿದು ಬಂದಿದೆ. ಬೆಳಿಗ್ಗೆ 8.45ರ ವೇಳೆಗೆ ಅಪರಿಚಿತ ವ್ಯಕ್ತಿ ಇದನ್ನ ಇದನ್ನ ಇಟ್ಟು ತೆರಳಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ರೈಲ್ವೆ ಎಡಿಜಿಪಿ ಅಲೋಕ್ ಮೋಹನ್ ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಕಂಟ್ರಿ ಮೇಡ್ ಗ್ರೆನೇಡ್ ಸಿಕ್ಕಿರುವ ಬಗ್ಗೆ ತನಿಖೆ ನಡೆಸಲಾಗುತ್ತದೆ. ರೈಲಿನಲ್ಲಿ ಸಿಸಿಟಿವಿ ಕೆಲಸ ಮಾಡುತ್ತಿಲ್ಲ. ಸದ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ.
Key words: Country Made Grenade Detected at Bangalore Railway Station.
#CountryMade #Grenade #Bangalore #RailwayStation.