ರಾಮನಗರ,ಅಕ್ಟೋಬರ್,10,2024 (www.justkannada.in): ದನದ ಕೊಟ್ಟಿಗೆಯಲ್ಲಿ ದಂಪತಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಜು (34) ಲಕ್ಷ್ಮೀ (30 ) ನೇಣಿಗೆ ಶರಣಾದ ದಂಪತಿಗಳು. ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದು ಇವರಿಗೆ ಮೂರು ವರ್ಷದ ಹೆಣ್ಣುಮಗುವಿದೆ.
ಈ ನಡುವೆ ದಂಪತಿ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಕ್ಕೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Key words: couple, committed, suicide, hanging