ಬೆಂಗಳೂರು,ಮೇ,29,2024 (www.justkannada.in): ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನ ಮೇ 31ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕಾಯ್ದಿರಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ, ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆಯನ್ನ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ಮುಂದೂಡಿತ್ತು. ಇದೀಗ ಇಂದು ವಿಚಾರಣೆ ನಡೆಸಿದ ಕೋರ್ಟ್ ವಾದ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶವನ್ನ ಮೇ31ಕ್ಕೆ ಕಾಯ್ದಿರಿಸಿದೆ.
Key words: court-reserved- Bhavani Revanna- bail application -order – May 31.