ಬೆಂಗಳೂರು,ಸೆಪ್ಟಂಬರ್,25,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಖಾಸಗಿ ದೂರು ಸಂಬಂಧ 3ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಈ ಆದೇಶ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ಸಲ್ಲಿಕೆ ಮಾಡಿದ್ದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಸಿದ್ದರಾಮಯ್ಯ ವಿರುದ್ದ 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ ಪಿಗೆ ಆದೇಶಿಸಿದೆ. CrPC ಅನ್ವಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಿ 24-12-2024ರೊಳಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ.
Key words: Court, order, investigate, against, CM Siddaramaiah