ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರ ವಿರುದ್ದ FIR ದಾಖಲಿಗೆ ಕೋರ್ಟ್ ಆದೇಶ

ಬೆಂಗಳೂರು, ಸೆಪ್ಟಂಬರ್,28,2024 (www.justkannada.in): ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ  ಎಂದು ಆರೋಪಕ್ಕೆ ಸಂಬಂಧಿಸಿದಂತೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಸೇರಿದಂತೆ ಇತರೆ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚುನವಣಾ ಬಾಂಡ್ ಮೂಲಕ 800 ಕೋಟಿ ರೂ.  ಸುಲಿಗೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು, ಈ ಸಂಬಂಧ  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಈ  ಕುರಿತು ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ವಿರುದ್ದ ಎಫ್ ಐಆರ್ ದಾಖಲಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

Key words: Court, orders, FIR,  against, BJP leaders