ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್.

ಬೆಂಗಳೂರು,ಫೆಬ್ರವರಿ,13,2023(www.justkannada.in):  ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಂದ  1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್‌ ನೀಡಿದ್ದರು. ಆದರೆ ಈ ಎಲ್ಲಾ ಚೆಕ್‌ ಬೌನ್ಸ್‌ ಆಗಿತ್ತು.

ಈ ಕುರಿತು ಹೂವಪ್ಪಗೌಡ  ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು.  ಪ್ರಕರಣದ ವಿಚಾರಣೆ ನಡೆಸಿದ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ನ್ಯಾ.ಜೆ.ಪ್ರೀತ್ ಅವರು ಜೈಲು ಶಿಕ್ಷೆ ವಿಧಿಸಿದ್ದಾರೆ. ಸಾಲ‌ ಮರುಪಾವತಿ ಮಾಡಬೇಕು. ಇಲ್ಲದಿದ್ದರೇ 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.

Key words:  court –sentenced-BJP MLA -MP Kumaraswamy – jail.